Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೆಕ್ಸಿಕೋದಲ್ಲಿ ಸಂಭ್ರಮಾಚರಣೆಯ ವೇಳೆ ಭೀಕರ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

26/06/2025 7:08 AM

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM

‘ಪರಮಾಣು ಯುದ್ಧ ನಿಲ್ಲಿಸಿದೆ’: ಭಾರತ-ಪಾಕ್ ಕದನ ವಿರಾಮ ಹೇಳಿಕೆಯನ್ನು ಪುನರುಚ್ಚರಿಸಿದ ಟ್ರಂಪ್, ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

26/06/2025 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
KARNATAKA

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5726/06/2025 7:01 AM

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ಹಾಗೂ ನಂತರದನಂತರದ ಎರಡು ದಿನಕ್ಕೆ ಯೆಲ್ಲೋ ಅಲರ್ಟ್ ನೀಡಲಾ ಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಹಾಸನ, ಆಲೂರು, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ವಿಸ್ತರಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎರಡು ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿದೆ.

Rain Alert: Heavy rain continues in the state: Holiday declared for schools and colleges in these districts
Share. Facebook Twitter LinkedIn WhatsApp Email

Related Posts

SHOCKING : ಮದುವೆಗೆ ಹುಡುಗಿ ಸಿಗದಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

26/06/2025 6:54 AM1 Min Read

GOOD NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!

26/06/2025 6:45 AM1 Min Read

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

25/06/2025 10:05 PM1 Min Read
Recent News

BREAKING : ಮೆಕ್ಸಿಕೋದಲ್ಲಿ ಸಂಭ್ರಮಾಚರಣೆಯ ವೇಳೆ ಭೀಕರ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

26/06/2025 7:08 AM

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM

‘ಪರಮಾಣು ಯುದ್ಧ ನಿಲ್ಲಿಸಿದೆ’: ಭಾರತ-ಪಾಕ್ ಕದನ ವಿರಾಮ ಹೇಳಿಕೆಯನ್ನು ಪುನರುಚ್ಚರಿಸಿದ ಟ್ರಂಪ್, ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

26/06/2025 7:01 AM

SHOCKING : ಮದುವೆಗೆ ಹುಡುಗಿ ಸಿಗದಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

26/06/2025 6:54 AM
State News
KARNATAKA

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5726/06/2025 7:01 AM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

SHOCKING : ಮದುವೆಗೆ ಹುಡುಗಿ ಸಿಗದಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

26/06/2025 6:54 AM

GOOD NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!

26/06/2025 6:45 AM

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

25/06/2025 10:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.