ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಅಂತೂ ವರುಣ ಅಬ್ಬರಿಸುತ್ತಿದ್ದು ರಸ್ತೆಯಲ್ಲಿ ನೀರು ನಿಂತು ಸಂಪೂರ್ಣವಾಗಿ ನದಿಯಂತೆ ಬದಲಾಗಿವೆ. ಇದೀಗ ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.
ಈ ಕುರಿತು @karnatakaSNDMC ಟ್ವೀಟ್ ಮಾಡಿದ್ದು, ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳು ನೀಡಿದ್ದು, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ ರೆಡ್ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ #ರೆಡ್ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. pic.twitter.com/wuXiuBAjP9— Karnataka State Natural Disaster Monitoring Centre (@KarnatakaSNDMC) May 20, 2025