ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಒಂದು ವಾರ ನೈಋತ್ಯ ಮಾನ್ಸೂನ್ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ. ಹಾವೇರಿ, ಬೀದರ್. ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದೆ.
ಆ.14 ರಿಂದ 18ರವರೆಗೆ ಕರಾವಳಿಗೆ ಯೆಲ್ಲೊ ಅಲರ್ಟ್ ಹಾಗೂ ಆ.19 ಮತ್ತು 20ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ಬೀದರ್, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಒಂದು ವಾರ ಯೆಲ್ಲೊ ಅಲರ್ಟ್ ನೀಡಲಾಗಿದೆ. ಆ.14 ಮತ್ತು 15ರಂದು ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.