ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 1 ವಾರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಒಂದು ವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪೂರ್ವಮುಂಗಾರಿನ ಅಬ್ಬರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಕರಾವಳಿಯ ಮೂರೂ ಜಿಲ್ಲೆಗಳಿಗೆ ಶನಿವಾರದಿಂದ ಒಂದು ವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುದಂತೆ ಸೂಚಿಸಲಾಗಿದೆ. ಹೀಗಾಗಿ ಮೀನುಗಾರರು ವಾಪಸಾಗಿದ್ದಾರೆ.
ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಐದು ದಿನ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆಯಾಗಲಿದ್ದು, ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ. ಈ ಸಂಬಂಧ ‘ಆರೆಂಜ್ ಅಲರ್ಟ್’ ಘೋಷಿಸಿಲಾಗಿದೆ.
ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ
ಸಾಮಾನ್ಯವಾಗಿ ಜೂನ್ ಮೊದಲ ವಾರ ರಾಜ್ಯವನ್ನು ಪ್ರವೇಶಿ ಸುವ ಮುಂಗಾರು ಮಳೆ ಮಾರುತಗಳು ಈ ಬಾರಿ ಮೇ 27 ಅಥವಾ ಮೇ 28ರ ವೇಳೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ ಮುಂಗಾರು ಅಬ್ಬರ ತಗ್ಗುವಮೊದಲೇಮುಂಗಾರುಕೂಡಪ್ರವೇಶಿಸುತ್ತಿರುವುದರಿಂದ ಭಾರಿ ಮಳೆಯ ನಿರೀಕ್ಷೆ ಇದೆ.