ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯಾದ್ಯಾಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮಧ್ಯ ಕರ್ನಾಟಕ, ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಕೋಲಾರ ಸೇರಿ 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.