ಬೆಂಗಳೂರು :ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದು ಮತ್ತು ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ.14, 15 ರಂದು ರಾಜ್ಯದ 17 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.