ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ.