ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದೇ ರೀತಿ ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.