Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಕರಾವಳಿ,ಉತ್ತರ ಒಳನಾಡಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!
KARNATAKA

Rain Alert : ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಕರಾವಳಿ,ಉತ್ತರ ಒಳನಾಡಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯ ಜೊತೆಗೆ ಎಚ್ಚರಿಕೆಯನ್ನೂ ನೀಡಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ಸೂರ್ಯನ ತಾಪಮಾನ ಏರುತ್ತಿರುವ ಬೆನ್ನಲ್ಲೇ ಈ ಬದಲಾವಣೆ ಕಂಡುಬಂದಿದ್ದು, ಪ್ರಕೃತಿಯ ಈ ವಿಚಿತ್ರ ವೈಪರೀತ್ಯ ಜನರನ್ನು ಕಂಗಾಲಾಗಿಸಿದೆ.

ಉತ್ತರ ಒಳನಾಡು: ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಭಾಗ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ.

ಮಲೆನಾಡು: ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಏಪ್ರಿಲ್ 25ರಿಂದ ಇಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು: ಮೈಸೂರು ಮತ್ತು ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಉಳಿದಂತೆ ಮೋಡ ಕವಿದ ವಾತಾವರಣವಿರಲಿದೆ.

ಸಾರ್ವಜನಿಕರಿಗೆ ಸೂಚನೆಗಳು
“ಸಂಜೆ ವೇಳೆಗೆ ಮಳೆ ಹಾಗೂ ಗಾಳಿಯ ವೇಗ ಹೆಚ್ಚಿರಲಿರುವುದರಿಂದ ವಾಹನ ಸವಾರರು, ರೈತರು ಮತ್ತು ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಲೆನಾಡು ಭಾಗಕ್ಕೆ ತೆರಳುವ ಪ್ರವಾಸಿಗರು ಹವಾಮಾನ ಗಮನಿಸಿ ಪ್ರಯಾಣ ಬೆಳೆಸುವುದು ಉತ್ತಮ.” ಒಂದೆಡೆ ಮಳೆಯ ಮುನ್ಸೂಚನೆ ಇದ್ದರೂ, ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ಧಗೆ ಮತ್ತು ಒಣಹವೆ ಮುಂದುವರಿಯಲಿದೆ ಎಂದು ವರದಿ ತಿಳಿಸಿದೆ.

Rain Alert: Heavy rain in the state for the next 7 days: 'Yellow Alert' declared for the coast and northern interior!
Share. Facebook Twitter LinkedIn WhatsApp Email

Related Posts

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

2 Mins Read
Recent News

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

State News
KARNATAKA

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರ್ಗಿ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪುವುದಿಲ್ಲ ಹಾಗೂ ಮದುವೆಗೆ ವಿರೋಧ ಮಾಡುತ್ತಾರೆ ಎಂಬ ಆತಂಕಕ್ಕೆ ಹೆದರಿದ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು…

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.