ಬೆಂಗಳೂರು : ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಕೇರಳ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.