ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ಒಟ್ಟು 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು ಈ ಒಂದು 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಹಾಗೂ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.