ಬೆಂಗಳೂರು : ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಕ್ಟೋಬರ್ 16 ರ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಭಾರೀ ಮಳೆ
ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.