ಬೆಂಗಳೂರು: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಸಲ್ಪ ಸಮಾಧಾನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಮಾರ್ಚ್ 16ರಿಂದ ಅಂದರೆ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ. 16 ರಿಂದ 21ರ ವರೆಗೆ: ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮಾ. 16 ರಂದು ಮಾತ್ರ: ಕೊಪ್ಪಳ, ವಿಜಯಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂದಿನ 2 ದಿನಗಳು: ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಾ. 18 ರಿಂದ (2 ದಿನ): ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ವರ್ಷಧಾರೆಯಾಗುವ ನಿರೀಕ್ಷೆಯಿದೆ.
ಮಾ. 19 ರಿಂದ (2 ದಿನ): ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಮಾ. 20 ರಿಂದ (2 ದಿನ): ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.
ಒಂದೆಡೆ ಮಳೆಯ ಮುನ್ಸೂಚನೆ ಇದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಭಾನುವಾರ ಕಲಬುರಗಿಯಲ್ಲಿ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ಅತೀ ಹೆಚ್ಚು ಬಿಸಿಲು ಅನುಭವಕ್ಕೆ ಬಂದಿದೆ.








