ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಹೆಚ್ಚಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 22ರವರೆಗೆ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ.
ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಕಾಣಿಸಿಕೊಳ್ಳುತ್ತಿದೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50–60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.