Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಮುಂದಿನ 4-5 ದಿನ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!
KARNATAKA

Rain Alert : ರಾಜ್ಯದಲ್ಲಿ ಮುಂದಿನ 4-5 ದಿನ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!

By kannadanewsnow5727/04/2025 8:45 AM

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 27, 28 ರಂದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದ್ದು, ಕೆಲವೆಡೆ ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.30 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಸಾರ್ವಜನಿಕರೇ ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.

ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು.

Rain Alert: Heavy rain with thunder and lightning in the state for the next 4-5 days: Alert announced for these districts!
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.