ಬೆಂಗಳೂರು: ಈಶಾನ್ಯ ಮಾನ್ಸೂನ್ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ,ಉಡುಪಿ, ದಕ್ಷಿಣ ಕನ್ನಡದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅ.23ರಂದು ಭಾರಿ ಮಳೆ ಸುರಿಯುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ.
ಇನ್ನು ಧಾರವಾಡ, ಗದಗ, ಹಾವೇರಿ, ಗದಗ ಸೇರಿ ಉತ್ತರ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.