ಬೆಂಗಳೂರು : ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಇದೀಗ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮೇ 4 ರವರೇಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಭಾಗದಲ್ಲೂ ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮೇ 4ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಮಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.