ಬೆಂಗಳೂರು : ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಆ.8ರಿಂದ ಮುಂದಿನ 2 ದಿನ ಹಾಗೂ ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಆ.8ರಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ. ಈ ಸಂದರ್ಭದಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.