ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇಂದಿನಿಂದ ಆಗಸ್ಟ್ 6 ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಬೀದರ್, ಕೊಡಗು, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು, ನಾಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನಕ್ಕೆ ಆಎರಂಜ್, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.