ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 1 ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.