ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಕಲಬುರಗಿ
ಕಲಬುರಗಿಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 2 ರ ಇಂದು ರಜೆ ಘೋಷಿಸಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನನುಕೂಲ ಆಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 2 ಸೋಮವಾರ ಜಿಲ್ಲಾದ್ಯಂತ ಎಲ್ಲ ಸರ್ಕಾರಿ, ಅನುದಾನಿ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಬೀದರ್
ಬೀದರ್ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಇಂದು ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿದೆ
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ ಡಿಡಿಪಿಐ ಸಲೀಂಪಾಷಾ.ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಅಹಿತಕರ ಘಟನೆಗಳು ನಡೆಯದಂತೆ ಶಿಕ್ಷಣ ಇಲಾಖೆ ಮುನ್ನೆಚರಿಕೆ ಕ್ರಮವನ್ನು ಕೈಗೊಂಡಿದೆ.