ಬೆಂಗಳೂರು : ಮುಂದಿನ 2 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.
ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ರಾಯಚೂರು, ಬೀದರ್, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಬೆಂಗಳೂರಿನಲ್ಲಿ ಮಳೆ ಈಗಾಗಲೇ ಆರಂಭವಾಗಿದ್ದು, ನಗರದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಭಾರೀ ಗಾಳಿ ಬೀಸುತ್ತಿರುವ ಕುರಿತು ವರದಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ.
ಅದೇ ರೀತಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನ 2 ರಿಂದ ರಾತ್ರಿ 11 ಗಂಟೆಯವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.