ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ನಾಳೆ ಸೆ.24 ನಾಡಿದ್ದು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.