ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ ನೀಡಿದೆ.
ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಒಡಿಶಾ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಸೆ. 21ರವರೆಗೆ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
ಸೆಪ್ಟೆಂಬರ್ 22 ಮತ್ತು 23ರಂದು ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಮರಾಠವಾಡ, ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಸೆ 22 ಮತ್ತು 23ರಂದು ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಮರಾಠವಾಡ, ಮಹಾರಾಷ್ಟ್ರ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ ನೀಡಿದೆ.