ಬೆಂಗಳೂರು : ಮೇ 10 ರವರೆಗೆ ಕರ್ನಾಟಕದ ಉತ್ತರ ಒಳನಾಡು ಮತ್ತು ಕರ್ನಾಟಕದ ದಕ್ಷಿಣ ಒಳನಾಡುಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತ ಹವಾಮಾನ ಇಲಾಖೆ (IMD) ನ ಪ್ರಕಾರ, ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆಗಳು ಕೇಳಿಬರುತ್ತಿದ್ದು, ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮವಾಗಿ ಹಲವು ಜಿಲ್ಲೆಗಳಲ್ಲಿ ವಾತಾವರಣ ಬದಲಾಗುತ್ತಿದೆ. ಬೆಂಗಳೂರಿನಲ್ಲಿ ಬರುವ ದಿನಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕ್ರಮೇಣ ಕರ್ನಾಟಕ ಮತ್ತು ತಮಿಳುನಾಡು ಕಡೆಗೆ ಚಲಿಸುತ್ತಿದ್ದು, ಬೆಂಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಮುಂದಿನ 7 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ, ಮಲೆನಾಡು & ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. @KarnatakaVarthe #KSNDMC pic.twitter.com/hbmplNPq70— Karnataka State Natural Disaster Monitoring Centre (@KarnatakaSNDMC) May 7, 2025