ನವದೆಹಲಿ : ದೇಶದಾದ್ಯಂತ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಈ ನಡುವೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ದೆಹಲಿ-ಎನ್‌ಸಿಆರ್ ರಾಜ್ಯಗಳಲ್ಲಿ ಕಳೆದ 2 ದಿನಗಳಿಂದ ತುಂಬಾ ದಟ್ಟವಾದ ಮಂಜು ಇದೆ. ಶೂನ್ಯ ಗೋಚರತೆಯಿಂದಾಗಿ, ಜನರು ವಾಹನ ಚಲಾಯಿಸಲು ತೊಂದರೆ ಎದುರಿಸುತ್ತಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತದ ಪರಿಣಾಮ ನವರಿ 6 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಹಿಮ ಬೀಳಲಿದೆ. ಇಂದು ಜನವರಿ 6 ಮತ್ತು ನಾಳೆ ಜನವರಿ 7 ರಂದು ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗಬಹುದು. ಜನವರಿ 6 ರಂದು ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ/ಹಿಮ ಬೀಳಲಿದೆ. ಜನವರಿ 7 ಮತ್ತು 8 ರಂದು ಈಶಾನ್ಯ ಭಾರತದ ಎಲ್ಲಾ 8 ರಾಜ್ಯಗಳು, ಕರ್ನಾಟಕ ತಮಿಳುನಾಡು, ಆಂಧ್ರಪ್ರದೇಶ ಸೇರಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜನವರಿ 6 ಮತ್ತು 7 ರಂದು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಶೀತ ದಿನದ ಪರಿಸ್ಥಿತಿಗಳು ಕಂಡುಬರುತ್ತವೆ. ಉತ್ತರ ಮಧ್ಯಪ್ರದೇಶ, ಬಿಹಾರ, ಉತ್ತರಾಖಂಡ, ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜು ಮತ್ತು ಶೀತ ಅಲೆಗಳ ಸಾಧ್ಯತೆಯಿದೆ.
Rainfall Warning : 05th January 2025
वर्षा की चेतावनी : 05th जनवरी 2025Press Release Link (04-01-2025): https://t.co/icpI7C6CvY#rainfallwarning #IMDWeatherUpdate #stayalert #staysafe #JammuandKashmir #himachal #mausam@moesgoi @ndmaindia @DDNational @airnewsalerts@HPSDMA… pic.twitter.com/8x7Oip17p7
— India Meteorological Department (@Indiametdept) January 4, 2025