ಬೆಂಗಳೂರು : ನವೆಂಬರ್ 27ರಿಂದ 3 ದಿನಗಳ ಕಾಲ ರಾಜ್ಯದ 10 ಜಿಲ್ಲೆಗಳಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಇಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.








