ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 2 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.28 ರವರೆಗೆ ಮಳೆ ಮುಂದುವರೆಯಲಿದ್ದು, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮಾತ್ರವಲ್ಲದೇ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ಒಂದೇ ದಿನಗಳೊಳಗೆ ‘ಮಹಿಳಾ ಆಯೋಗ’ದ ದೂರುಗಳ ತನಿಖೆಗೆ ‘ಸಿಎಂ ಬೊಮ್ಮಾಯಿ’ ಸೂಚನೆ
BIGG NEWS : ‘ಮುರುಘಾ ಶ್ರೀ’ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ : ಪರಶುರಾಂ ಸ್ಪೋಟಕ ಹೇಳಿಕೆ