ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ ಬಿಗ್ ಶಾಕ್ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆ.ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರದಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದ್ದು, ಬೆಳಗ್ಗೆ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Due to easterly wave, isolated/Scattered light/moderate rainfall very likely over Andaman & Nicobar Islands, Karnataka, Kerala, Tamil Nadu and Lakshadweep during next 4-5 days.
Isolated heavy rainfall also likely over Tamilnadu and Kerala on 29th November, 2022. pic.twitter.com/jWIVTdJIjm— India Meteorological Department (@Indiametdept) November 29, 2022