ಬೆಂಗಳೂರು : ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಡಿ.8 ರಿಂದ ರಾಜ್ಯಾದ್ಯಂತ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 8, 9 ಮತ್ತು 10ರಂದು ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ.
ಇನ್ನೂ, ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಐದು ದಿನವು ಒಣಹವೆ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಲ್ಲದೇ (ಡಿಸೆಂಬರ್ 5) ರ ನಾಳೆಯಿಂದ ಡಿಸೆಂಬರ್ 8 ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
BIGG NEWS : ‘ಅಲೆಮಾರಿ’ ಸಮುದಾಯದ ಜನತೆಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 10 ಸಾವಿರ ಮನೆ ಹಂಚಿಕೆ
Good News: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡರಂತೆ ‘ಪಿಎಂ ಶ್ರೀ ಶಾಲೆ’ಗಳು ಆರಂಭ | PM SHRI School