ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲು ಹೆಚ್ಚಳ, ಬಂಗಾಳಕೊಲ್ಲಿ, ಶ್ರೀಲಂಕಾ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಿಂದಾಗಿ ಮಳೆ ಸಾಧ್ಯತೆ ಇದೆ. ಇಂದು ಅಲ್ಲಲ್ಲಿ ಮಳೆಯಾಗಲಿದೆ. ಮಾರ್ಚ್ 23 ಹಾಗೂ 24 ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ.
ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ.22 ರಿಂದ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆ ಗುಡುಗುಸಹಿತ ಲಘು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಮಾ.23ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮ ರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕಲಬುರಗಿ, ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.