ಬೆಂಗಳೂರು : ರಾಜ್ಯದ ಹಲವು ಕಡೆ ಜೂನ್ 23 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ. ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 19ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 19ರಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಒಳನಾಡಿನ ಮಲೆನಾಡು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ.#KarnatakaRains pic.twitter.com/EcXt9zAuHt
— DIPR Karnataka (@KarnatakaVarthe) June 16, 2025