ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದ.ಕನ್ನಡ, ಉ.ಕನ್ನಡ, ಉಡುಪಿ, ಬೆಳ ಗಾವಿ, ಚಿಕ್ಕಮಗಳುರು, ಶಿವ ಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆ ಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.