ಬೆಂಗಳೂರು : ರಾಜ್ಯದಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ.
ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿವೆ.