ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಾಮರಾಜನಗರದಲ್ಲಿ ಮಳೆಯಾಗಲಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದ್ದು, ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.