ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು,ಮೈಸೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 23 ರ ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 24ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.