ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 20 ರಿಂದ ಮಳೆಯಾಗುವ ಸಾಧ್ಯತೆ ಇದೆ. .ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಚಾಮರಾಜನಗರ, ಹಾಸನ, ಕೊಡಗು. ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ 20 ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.