ಬೆಂಗಳೂರು : ಮಾಂಡೌಸ್ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣದ ಮುಂದುವರೆದಿದೆ.
ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದ್ದು, ಚಳಿ, ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ಮಾಹಿತಿ ನೀಡಿದ್ದಾರೆ.
ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿ ಒಳನಾಡು, ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ, ಮಿಂಡಿನೊಂದಿಗೆ ಮಳೆಯಾಗಲಿದೆ. ಮಾಂಡೌಸ್ ಚಂಡಮಾರುತದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವು ಕಡೆ ಬೆಳೆ ನಾಶವಾಗಿದೆ.
ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ‘ತಿಮ್ಮಪ್ಪ ಭಾಗ್ವತ್’ ಸಾವು
ಗುರುವಿಗೆ ಅವಮಾನಿಸುವ ನೇತೃತ್ವವನ್ನು ಸ್ವತಃ ಬೊಮ್ಮಾಯಿಯವರೇ ವಹಿಸಿರುವಂತಿದೆ: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕು