ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೂರು ದಿನಗಳಿಂದ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಡಿ.16 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ನಡುವೆ ಭಾರೀ ಥಂಡಿ ವಾತಾವರಣ ನಿರ್ಮಾಣವಾಗಿದ್ದು, ಹಲವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜನರು ಮನೆಯಿಂದ ಹೊರಗೆ ಬರದಿರುವ ಹಾಗೆ ರಾಜ್ಯದಲ್ಲಿ ಭಾರೀ ಥಂಡಿ ವಾತಾವರಣ ನಿರ್ಮಾಣವಾಗಿದ್ದು, ಜನರು ಸ್ವೆಟರ್, ಟೊಪ್ಪಿಗಳಿಗೆ ಮೊರೆ ಹೋಗಿದ್ದಾರೆ.
(i) Rainfall warning: Heavy rainfall at isolated places very likely over Tamil Nadu, South Interior Karnataka & south Coastal Andhra Pradesh today and over Kerala & Mahe during 11th-13th December, 2022 and decrease in rainfall activity over the region thereafter. pic.twitter.com/90WZCO9Hai
— India Meteorological Department (@Indiametdept) December 11, 2022
ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ |JOB FAIR
ರಾಜಸ್ತಾನ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ… ಕಾರಣ ನಿಗೂಢ