ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದು ವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಒಳನಾಡಿ ನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.