ಬೆಂಗಳೂರು : ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೇ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ. ಮಂಡ್ಯ, ರಾಮನಗರ, ಮೈಸೂರು. ತುಮಕೂರು , ವಿಜಯಪುರ ಹಾಗೂ ಹಾವೇರಿ ಸೇರಿ ಇತರೆ ಜಿಲ್ಲೆಗಳಲ್ಲಿ ನ.24 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವೈರಲ್ ಆಗ್ತಿದೆ 1985ರ ರೆಸ್ಟೋರೆಂಟ್ ಬಿಲ್: ಇಲ್ಲಿ ಆರ್ಡರ್ ಮಾಡಿದ ಊಟದ ಬೆಲೆ ಕೇಳಿದ್ರೆ ಶಾಕ್ ಆಗೋದು ಪಕ್ಕಾ!
BREAKING NEWS : ತಡರಾತ್ರಿ ಬೆಂಗಳೂರಿನ ರೌಡಿಗಳ ಮನೆ ಮೇಲೆ ‘ಸಿಸಿಬಿ’ ದಾಳಿ : ಖಡಕ್ ವಾರ್ನಿಂಗ್