ಬೆಂಗಳೂರು: ‘ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು, ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದ  , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಜಯನಗರ, ಶಾಂತಿ ನಗರ, , ಮಲ್ಲೇಶ್ವರಂನಲ್ಲಿ ಭಾರೀ ಮಳೆಯಾಗಿದೆ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು,ವಾಹನ ಸವಾರರು  ಪರದಾಡಿದ್ದಾರೆ.

ಕರ್ನಾಟಕದಲ್ಲಿ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿಯೂ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert ) ಕೂಡ ಘೋಷಣೆ ಮಾಡಿದೆ.ನಾಳೆ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿತ್ತು.

‘ಕುಡಿದು ಟೈಟಾದವರನ್ನು ಸುರಕ್ಷಿತವಾಗಿ ಮನೆ ತಲುಪಿಸುವುದು ಬಾರ್ ಓನರ್ ಜವಾಬ್ದಾರಿ’

BREAKING NEWS ; ಖಾತೆದಾರರ 4ನೇ ಪಟ್ಟಿ ಬಿಡುಗಡೆ ಮಾಡಿದ ‘ಸ್ವಿಸ್ ಬ್ಯಾಂಕ್’ ; 34 ಲಕ್ಷ ಖಾತೆದಾರರಲ್ಲಿ ಭಾರತೀಯರೆಷ್ಟು ಮಂದಿ ಗೊತ್ತಾ?

Share.
Exit mobile version