ಬೆಂಗಳೂರು : ರಾಜ್ಯಾದ್ಯಂತ ತಾಪಮಾನ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2-3ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಮಳೆ ಅಬ್ಬರಿಸಿದೆ. ಇಂದು,ನಾಳೆ ಬೆಂಗಳೂರು, ಕೋಲಾರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








