ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಜ.26, 27ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಇಳಿಮುಖವಾಗಿದ್ದ ಚಳಿ 2 ದಿನದಿಂದ ಮತ್ತೆ ಹೆಚ್ಚಳವಾಗಿದೆ. ಮೋಡ ಕವಿದ ವಾತಾವರಣ, ತಂಪಾದ ಗಾಳಿ ಬೀಸುತ್ತಿರುವುದು ಸೇರಿ ಇತರ ಕಾರಣಗಳು ಚಳಿ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







