ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮಳೆ, ಜು.15ರ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡೂರು ದಿನದಿಂದ ಮುಂಗಾರು ಮಳೆ ದುರ್ಬಲವಾಗಿದ್ದು, ಜು.15ರ ಬಳಿಕ ಚುರುಕುಗೊಳ್ಳಲಿದೆ. ಜು.3 ರಿಂದ ಜು.9ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.23ರಷ್ಟು ಹೆಚ್ಚಿನ ಮಳೆಯಾಗಿದೆ.
ಒಟ್ಟಾರೆ ಮುಂಗಾರು ಅವಧಿಯಲ್ಲಿ ಶೇ.9 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.