ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು, ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 17 ಮತ್ತು 18 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ.