ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸದ್ದು, ಈ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಿರಲಿದೆ.
ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೂ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.