ಬೆಂಗಳೂರು: ರಾಜ್ಯಾಧ್ಯಂತ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಆರೆಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಗದಗ, ಉಡುಪಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶನಿವಾರದಂದು ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಎರಡು ದಿನ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬುದಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.ಜೆ ಅಥವಾ ರಾತ್ರಿ ವೇಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.