ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ ಕರಾವಳಿಯಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕನ್ನಡ, ಉಡುಪಿ ಕರಾವಳಿಯಲ್ಲಿದ್ದು ಸಂಜೆ ಶಿಥಿಲಗೊಳ್ಳಲಿದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು
ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು
ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇವತ್ತು ತಡ ರಾತ್ರಿ ಅಥವಾ ನಾಳೆ ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಅಲ್ಲಲ್ಲಿ ತುಂತುರು ಮಾತ್ರ ಇರಬಹುದು.
ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.