Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಅವರು ಅತ್ಯಂತ ಗಟ್ಟಿ ನಾಯಕ’: ಪ್ರಧಾನಿ ಮೋದಿ ಕಾರ್ಯಶೈಲಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

​ಗ್ರಾಹಕರಿಗೆ ದಾರಿ ತಪ್ಪಿಸುವ ಜಾಹೀರಾತು: ಕಿಂಡರ್ ಜಾಯ್, ಸಫೋಲ ಸೇರಿದಂತೆ 14 ಪ್ರಮುಖ ಬ್ರ್ಯಾಂಡ್‌ಗಳಿಗೆ FSSAI ಶಾಕ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
KARNATAKA

Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow57

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರವಿರಲಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ತುಮಕೂರು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮೀನುಗಾರರಿಗೆ ಎಚ್ಚರಿಕೆ
ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ ಇರಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ?
ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ಸಂಭವವಿದೆ. ನಗರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.

Rain Alert: Thunderstorms and hailstorms across the state today: 'Yellow Alert' declared for 17 districts
Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

​’ಅವರು ಅತ್ಯಂತ ಗಟ್ಟಿ ನಾಯಕ’: ಪ್ರಧಾನಿ ಮೋದಿ ಕಾರ್ಯಶೈಲಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

​ಗ್ರಾಹಕರಿಗೆ ದಾರಿ ತಪ್ಪಿಸುವ ಜಾಹೀರಾತು: ಕಿಂಡರ್ ಜಾಯ್, ಸಫೋಲ ಸೇರಿದಂತೆ 14 ಪ್ರಮುಖ ಬ್ರ್ಯಾಂಡ್‌ಗಳಿಗೆ FSSAI ಶಾಕ್!

​ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು: ಹಾರ್ಮುಜ್ ಜಲಸಂಧಿ ಮತ್ತೆ ಬಂದ್! ಇಸ್ರೇಲ್ ಭೀಕರ ದಾಳಿ ಬೆನ್ನಲ್ಲೇ ಇರಾನ್ ನೌಕಾಪಡೆ ಬಿಗಿ ಕ್ರಮ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.